ಸಿದ್ದಾಪುರ, ಸೆ.22: ರೈತ ಸಂಘದ ಕಾರ್ಯದರ್ಶಿ ನಿರ್ವಾಣಪ್ಪ ಅವರನ್ನು ಬಂಧನಕ್ಕೆ ಒಳಪಡಿಸಿರುವದನ್ನು ಖಂಡಿಸಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಇಲ್ಲಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪಕ್ಷದ ವೀರಾಜಪೇಟೆ ಘಟಕದ ಅಧ್ಯಕ್ಷ ಮುಸ್ತಫ ಮಾತನಾಡಿ, ನಿರಾಶ್ರಿತರ ಕೇಂದ್ರದಲ್ಲಿ ನಡೆದಿರುವ ಹಲ್ಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು. ಯಾವದೇ ಕಾರಣಕ್ಕೂ ಅಮಾಯಕರಿಗೆ ಕಿರುಕುಳ ನೀಡಬಾರದು. ಎಂದರು. ನಿರ್ವಾಣಪ್ಪರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಶೌಕತ್ ಅಲಿ, ಷಂಶೀರ್ ಪ್ರಮುಖರಾದ ಹನೀಫ್, ಬಶೀರ್, ಇಬ್ರಾಹಿಂ ಸೇರಿದಂತೆ ಇತರರು ಇದ್ದರು.