ಮಡಿಕೇರಿ, ಸೆ. 22: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಹೆಚ್ಚಿನ ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಲಹೆಯಿತ್ತರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ನಡೆದ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವ ನಿಟ್ಟಿನಲ್ಲಿ ಸತತ ಪ್ರಯತ್ನ ಇರಬೇಕು. ಪಠ್ಯದ ಜೊತೆಗೆ, ಪ್ರಶ್ನೆ ಪತ್ರಿಕೆಗಳ ಅಧ್ಯಯನ ಮಾಡುವಂತಾಗ ಬೇಕು. ಯಾವದೇ ನಾಗರಿಕ ಪರೀಕ್ಷೆ ತೆಗೆದುಕೊಂಡಲ್ಲಿ, ಹಲವು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗಲಿದೆ. ಇದರಿಂದ ಒಂದಲ್ಲ ಒಂದು ಉದ್ಯೋಗ ಗಿಟ್ಟಿಸಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿ.ಪಂ. ಸಿಇಓ ಪ್ರಶಾಂತ್

ಜಿ.ಪಂ. ಸಿಇಓ ಪ್ರಶಾಂತ್ ಅರ್ಜಿ ಆಹ್ವಾನಿಸಲಾಗಿದ್ದು, 20 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನ್ನಾಥ್ ಮಾತನಾಡಿ, ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಮತ್ತು ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ವೈ. ಚಿತ್ರಾ, ಮಹಾಂತೇಶ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗುರುರಾಜ್, ಹಾಕತ್ತೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ ಇತರರು ಇದ್ದರು.