ಮಡಿಕೇರಿ, ಸೆ. 23: ಕೊಡವ ದೀನಬಂಧು ಟ್ರಸ್ಟ್ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪದವಿ/ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದಿರುವ ಕೊಡವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಿಸಲಾಯಿತು.
ಸುಮಾರು 30 ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡರು. ಈ ಸಂದರ್ಭ ಟ್ರಸ್ಟ್ ಅಧ್ಯಕ್ಷ ಕಟ್ಟೆರ ಕಾರ್ಯಪ್ಪ, ಪ್ರಮುಖರಾದ ವಿಂಗ್ ಕಮಾಂಡರ್ ಮಾದಪ್ಪ, ಚೌರೀರ ಕರ್ನಲ್ ಗಣಪತಿ ಕಾಲೇಜು ಪ್ರಾಂಶುಪಾಲೆ ಪಾರ್ವತಿ ಅಪ್ಪಯ್ಯ, ಹಿಂದಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಹೆಗ್ಡೆ, ಆಶಾ ಕಿರಣ್ ಹಾಗೂ ಇನ್ನಿತರ ಉಪಸ್ಥಿತರಿದ್ದರು.