ಮಡಿಕೇರಿ, ಸೆ. 23: ಪ್ರಸಕ್ತ ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಜಿಲ್ಲೆಗೆ 10 ಗುರಿ ನಿಗದಿಪಡಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತರು ಗೌರವಾನ್ವಿತ ಜೀವನ ನಡೆಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಈ ಯೋಜನೆಯಡಿ ಸ್ವ-ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ರೂ. 50 ಸಾವಿರಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್‍ಟಿಜಿಎಸ್ ಮೂಲಕ ಜಮೆ ಮಾಡಲಾಗುತ್ತಿದೆ. ಈ ಪೈಕಿ ರೂ. 25 ಸಾವಿರಗಳ ನೇರ ಸಾಲ ಹಾಗೂ ರೂ. 25 ಸಾವಿರಗಳನ್ನು ಸಹಾಯಧನವನ್ನಾಗಿ ನೀಡಲಾಗುವದು. ಸಂಬಂಧಪಟ್ಟ ದಾಖಲೆಗಳೊಂದಿಗೆ ಲಿಂಗತ್ವ ಅಲ್ಪಸಂಖ್ಯಾತರ ದೃಢೀಕರಣ ಪತ್ರ ಹಾಗೂ ರೂ. 50 ಛಾಪಾ ಕಾಗದವನ್ನು ಲಗತ್ತಿಸಿ ಈ ಕಚೇರಿಗೆ ಸಲ್ಲಿಸುವದು. ಆಸಕ್ತರು ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ/ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ.ಸಂ:08272-298379 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆಗೆ

ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ (ಸಂತ್ರಸ್ತ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಲಾಗುವದು) ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗಿ ಯೋಜನೆಯಡಿ ಜಿಲ್ಲೆಯಲ್ಲಿ ಭೌತಿಕ ಗುರಿಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ನಿಗದಿಪಡಿಸಲಾಗಿದ್ದು, ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 45 ವರ್ಷ ವಯೋಮಿತಿಗೊಳಪಟ್ಟು ವಾರ್ಷಿಕ ಆದಾಯ ರೂ. 40 ಸಾವಿರ ಅಥವಾ ಬಡತನ ರೇಖೆಗೆ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ.

ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ 3 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ. 08272-298379, 7996368687, ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ ದೂ. 08272-228197, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾ.ಪಂ. ಆವರಣ, ಸೋಮವಾರಪೇಟೆ ದೂ. 08276-282281, ವೀರಾಜಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ, ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು, ಪೊನ್ನಂಪೇಟೆ ದೂ. 08274-249010 ನ್ನು ಸಂಪರ್ಕಿಸಬಹುದು.

18 ರಿಂದ 45 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವದು. ಪರಿಶಿಷ್ಟ ಜಾತಿ, ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ. 3 ಲಕ್ಷ ಹಾಗೂ ಶೇ. 50 ವಿಧವೆಯರು, ಅಂಗವಿಕಲರು ಮತ್ತು ಸಂಕಷ್ಟ ಮಹಿಳೆಯರಿಗೆ ಶೇ. 30 ಮತ್ತು ಇತರ ವರ್ಗದವರಿಗೆ ಶೇ. 10 ಸಹಾಯಧನ ನೀಡಲಾಗುವದು. ಕುಟುಂಬದ ವಾರ್ಷಿಕ ಆದಾಯ ರೂ. 40 ಸಾವಿರ ಮೀರಬಾರದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕಿರುಸಾಲ ಯೋಜನೆಗೆ

ಪ್ರಸಕ್ತ ಸಾಲಿನಲ್ಲಿ ಕಿರುಸಾಲ ಯೋಜನೆಯಡಿ ಜಿಲ್ಲೆಗೆ 2 ಗುರಿಗಳನ್ನು ನಿಗದಿಪಡಿಸಲಾಗಿದ್ದು, ಅರ್ಹ ಸ್ತ್ರೀಶಕ್ತಿ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಕೊಡಗು ಜಿಲ್ಲೆಗೆ ಪ.ಜಾತಿ-1, ಪ.ಪಂ-1, ಒಟ್ಟು 2 ಗುರಿಗಳನ್ನು ನಿಗದಿಪಡಿಸಲಾಗಿದ್ದು, ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ ರೂ. 2 ಲಕ್ಷಗಳನ್ನು ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವದು.

ಕಿರುಸಾಲ ಪಡೆಯುವ ಸ್ತ್ರೀ ಶಕ್ತಿ ಗುಂಪುಗಳು ಬ್ಯಾಂಕ್ ಖಾತೆಯನ್ನು ಹೊಂದಿದ್ದು ಚಾಲ್ತಿಯಲ್ಲಿರಬೇಕು, ಗುಂಪಿನ ಸದಸ್ಯರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಗುಂಪು ಬೇರೆ ಯಾವದೇ ಆರ್ಥಿಕ ಸಂಸ್ಥೆ/ಬ್ಯಾಂಕ್‍ಗಳಲ್ಲಿ ಸಾಲಗಾರರಾಗಿರಬಾರದು, ಈಗಾಗಲೇ ಕಿರುಸಾಲ ಯೋಜನೆಯಡಿ ಪ್ರಯೋಜನ ಪಡೆಯದೇ ಇರುವ ಸಂಘಗಳು ಮಾತ್ರ ಅರ್ಹರಾಗಿರುತ್ತಾರೆ. ಗುಂಪು ಆರ್ಥಿಕವಾಗಿ ಸದೃಡವಾಗಿದ್ದು, ಗುಂಪಿನ ಉಳಿತಾಯ ಗರಿಷ್ಠ 2 ಲಕ್ಷಗಳಿಗೆ ಮೇಲ್ಪಟ್ಟಿರಬೇಕು, ಗುಂಪು ಒಂದು ಯೋಜನಾ ಘಟಕವನ್ನು ಸ್ಥಾಪಿಸಲು ಯೋಜನಾ ವರದಿಯನ್ನು ಹೊಂದಿರಬೇಕು, ತಾಲೂಕು ಮಟ್ಟದ ಸ್ತ್ರೀ ಶಕ್ತಿ ಒಕ್ಕೂಟದಲ್ಲಿ ನೋಂದಾವಣೆಯಾಗಿದ್ದು ರೂ. 250 ಶುಲ್ಕ ಪಾವತಿಸಿ ಸದಸ್ಯತ್ವ ಹೊಂದಿರಬೇಕು. ಸದಸ್ಯರೆಲ್ಲರೂ ರೂ. 50 ಛಾಪಾ ಕಾಗದದಲ್ಲಿ ಕರಾರು ಪತ್ರ ಹಾಗೂ ಸ್ತ್ರೀಶಕ್ತಿ ಗುಂಪು ಗ್ರೇಡೀಂಗ್ ಗೆ ಒಳಪಟ್ಟಿರಬೇಕು.

ಅರ್ಹ ಪ.ಜಾತಿ ಮತ್ತು ಪ.ಪಂಗಡದ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ. 08272-298379, 7996368687, ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ ದೂ. 08272-228197, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾ.ಪಂ. ಆವರಣ, ಸೋಮವಾರಪೇಟೆ ದೂ. 08276-282281, ವೀರಾಜಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ, ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು, ಪೊನ್ನಂಪೇಟೆ ದೂ. 08274-249010 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.