ಮಡಿಕೇರಿ, ಸೆ. 23: ಜಿಲ್ಲಾಡಳಿತ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಜಿಲ್ಲೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಡಿಕೇರಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ವಿಜ್ಞಾನ ಸಮಿತಿ, ಪದವಿಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಇಕೋ ಕ್ಲಬ್ ಸರಕಾರಿ ಪದವಿಪೂರ್ವ ಕಾಲೇಜು ಮಡಿಕೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾ. 25 ರಂದು ವಿಶ್ವ ಓಝೋನ್ ಪದರ ಸಂರಕ್ಷಣಾ ದಿನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಪೂರ್ವಾಹ್ನ 10.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ಮಡಿಕೇರಿ ಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್. ವಿಜಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಧನಂಜಯ ಅವರು ಬಹುಮಾನ ವಿತರಣೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಪರಿಸರ ಅಧಿಕಾರಿ ಎ. ಉದಯಕುಮಾರ್ ಹಾಗೂ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ ಹಾಗೂ ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ಶಿಕ್ಷಕ ಜಿ. ಶ್ರೀನಾಥ್ ಹಾಗೂ ಇತರರು ಉಪಸ್ಥಿತರಿರುವರು.