ಮಡಿಕೇರಿ, ಸೆ.24 :ಶ್ರೀರಾಮ್ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿಯ ಆಶ್ರಯದಲ್ಲಿ ತಾ.25 ರಂದು (ಇಂದು) ಕುಶಾಲನಗರದ ರೈತ ಸಹಕಾರ ಭವನದಲ್ಲಿ ಸಂತ್ರಸ್ತ ಕುಟುಂಬಗಳ 450 ಮಕ್ಕಳು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಉದ್ಯಮ ಕ್ಷೇತ್ರದ ಕಾರ್ಮಿಕರ 1602 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೈನಾನ್ಸ್‍ನ ಮಂಗಳೂರು ವಿಭಾಗೀಯ ಕಛೇರಿಯ ಪ್ರಧಾನ ವ್ಯವಸ್ಥಾಪಕ ಶರಶ್ಚಂದ್ರ ಭಟ್ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಫೈನಾನ್ಸ್‍ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುದರ್ಶನ್ ಬಿ.ಹೊಳ್ಳ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದÀ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 8ನೇ ತರಗತಿಯಿಂದ 10ನೇ ತರಗತಿವರೆಗೆನ ಶೇ. 60ಕ್ಕಿಂತಲೂ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 3 ಸಾವಿರ ರೂ. ಮತ್ತು ಪಿ.ಯು.ಸಿ. ಹಂತದ ವಿದ್ಯಾರ್ಥಿಗಳಿಗೆ 3500 ರೂ.ನಂತೆ ಒಟ್ಟು 49.70 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಕಳೆದ ಐದು ವರ್ಷಗಳಿಂದ ಸಂಸ್ಥೆಯಿಂದ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀರಾಮ್ ಟ್ರಾನ್ಸ್‍ಪೋರ್ಟ್ ಫೈನಾನ್ಸ್‍ನ ಪ್ರಧಾನ ವ್ಯವಸ್ಥಾಪಕ ಕೆ.ಶರಶ್ಚÀಂದ್ರ ಭಟ್, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ವಿಧಾನ ಪರಿಷತ್ ಸದಸ್ಯ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪಣ್ಣೇಕರ್, ಕೊಡಗು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ್, ಅರಣ್ಯ ಉಪಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷರಾದ ನಾಪಂಡ ಮುತ್ತಪ್ಪ, ಜಿಲ್ಲಾ ಪ್ರವಾಸಿ ವಾಹನ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷ ಸಂಪತ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಬಿ. ನಾಗರಾಜ್, ಪ್ರಮೋದ್ ಅಂಚನ್ ಹಾಗೂ ಗಂಗಾಧರ್ ಉಪಸ್ಥಿತರಿದ್ದರು.