ಮಡಿಕೇರಿ, ಸೆ. 24: ರಾಜ್ಯ ಸರಕಾರ ಮೈಸೂರಿನ ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರು ಭಾಗದ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗೆ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಇದಕ್ಕೆ ಯದುವೀರ್ ಒಡೆಯರ್ ಒಪ್ಪಿಗೆ ಸೂಚಿಸಿರುವದಾಗಿ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.