ಮಡಿಕೇರಿ, ಸೆ. 25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ತಾ. 26 ರಂದು (ಇಂದು) ಬೆಳಿಗ್ಗೆ 9.30 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ.

ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್. ಬೋಜೇಗೌಡ, ಆಯನೂರು ಮಂಜುನಾಥ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಟಿ. ಕಿರಣ್ ಕಾರ್ಯಪ್ಪ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಕೂಡಿಗೆ ಡಯಟ್ ಪ್ರಾಂಶುಪಾಲ ಮತ್ತು ಸಾ.ಶಿ.ಇ. ಉಪ ನಿರ್ದೇಶಕ ವಾಲ್ಟರ್ ಹಿಲೇರಿ ಡಿ’ಮೆಲ್ಲೊ, ಮಡಿಕೇರಿ ಕ.ರಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಎನ್.ಕೆ. ಮೆಹಬೂಬ್ ಸಾಬ್, ಅನುದಾನಿತ ಪ್ರೌ.ಶಾ.ಸ.ಶಿ. ಸಂಘದ ಅಧ್ಯಕ್ಷ ವಿಲ್ಫ್ರೇಡ್ ಕ್ರಾಸ್ತಾ, ತಾ.ದೈ.ಶಿ.ಶಿ.ಸಂಘದ ಅಧ್ಯಕ್ಷ ನಾಗಯ್ಯ ಶೆಟ್ಟಿ, ಕರ್ನಾಟಕ ರಾಜ್ಯ ಎಸ್.ಸಿ.ಎಸ್.ಟಿ. ಪ್ರಾ.ಮಾ.ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಬಿ.ಕೃಷ್ಣಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.