ಸೋಮವಾರಪೇಟೆ, ಸೆ. 25: ಚೈಲ್ಡ್‍ಲೈನ್ ಸಂಸ್ಥೆಯ ವತಿಯಿಂದ ಸಮೀಪದ ತೋಳೂರುಶೆಟ್ಟಳ್ಳಿ ಹಾಗೂ ಇನಕನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿ.ಜೆ. ಭಾರತಿ ವಹಿಸಿದ್ದರು. ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ, ಪೋಷಣೆಯ ಬಗ್ಗೆ ಚೈಲ್ಡ್‍ಲೈನ್ ಸಂಸ್ಥೆಯ ಯೋಗೇಶ್ ಮತ್ತು ಬಿ.ಕೆ. ಕುಮಾರಿ ಅವರುಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೇತನ್ ಬಾಬು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಬ್ಬಮ್ಮ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ವಸ್ತ್ರಗಳನ್ನು ಇದೇ ಸಂದರ್ಭ ವಿತರಿಸಲಾಯಿತು.