ಸೋಮವಾರಪೇಟೆ, ಸೆ. 26: ರೈತ ಸಂಘದ ಕಾರ್ಯದರ್ಶಿ ಮತ್ತು ದಲಿತಪರ ಸಂಘಟನೆಗಳ ಮುಖಂಡ ಡಿ.ಎಸ್.ನಿರ್ವಾಣಪ್ಪ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ವಕೀಲ ಹಾಗೂ ದಲಿತ ಹಿತರಕ್ಷಣಾ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿ.ಇ.ಜಯೇಂದ್ರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡಿ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಯು.ಚಂದ್ರಪ್ಪ, ಪರಿಶಿಷ್ಟ ಜಾತಿ-ಪಂಗಡಗಳ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಪಿ.ಹೊನ್ನಪ್ಪ, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಕಾರ್ಯದರ್ಶಿ ಎಚ್.ಪಿ.ರಾಜಪ್ಪ, ಒಕ್ಕೂಟದ ಖಜಾಂಚಿ ಎಚ್.ಎ.ನಾಗರಾಜ್ ಉಪಸ್ಥಿತರಿದ್ದರು.