ಗೋಣಿಕೊಪ್ಪಲು. ಸೆ. 25: ಬಲ್ಯಮುಂಡೂರು ಗ್ರಾಮ ಪಂಚಾಯ್ತಿಯ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯ್ತಿ ಅಧ್ಯಕ್ಷರಾದ ಚಿಂಡಮಾಡ ಕುಶಿ ಕುಮಾರ್ ಅಧ್ಯಕ್ಷತೆಯಲ್ಲಿ ತಾ.28ರ ಪೂರ್ವಾಹ್ನ 11. ಗಂಟೆಗೆ ನಡಿಕೇರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕರಾಗಿರುವ ಶಿವರಾಜ್ ಬಾಸೂರ್ ಭಾಗವಹಿಸಲಿದ್ದಾರೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.