ಸೋಮವಾರಪೇಟೆ, ಸೆ. 27: ಜಿ. ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲೂಕು ಸಮಗ್ರ ಶಿಕ್ಷಾ ಅಭಿಯಾನ ಸಂಯುಕ್ರ ಆಶ್ರಯದಲ್ಲಿ ತಾ. 28 ರಂದು (ಇಂದು) ಇಲ್ಲಿನ ಓಎಲ್‍ವಿ ಕಾನ್ವೆಂಟ್‍ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳು ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ನಾಗರಾಜಯ್ಯ ತಿಳಿಸಿದ್ದಾರೆ.

ಬೆಳ್ಳಿಗೆ 9.30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಟಿ. ಕಿರಣ್ ಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಹಾನಗಲ್ಲು ಗ್ರಾ.ಪಂ. ಉಪಾಧ್ಯಕ್ಷ ಎಚ್.ವಿ. ಮಿಥುನ್, ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಘಟಕದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಕ.ರಾ.ಪ್ರಾ.ಶಿ. ಸಂಘದ ವಲಯ ಉಪಾಧ್ಯಕ್ಷ ಸಿ.ಕೆ. ಶಿವಕುಮಾರ್, ಜಿಲ್ಲಾ ಗೌರವಾಧ್ಯಕ್ಷ ಎಸ್.ಎ. ಯೋಗೇಶ್, ಶಾಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಮತ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸೆರಿನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಹಾಗೂ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಕಲೋತ್ಸವ ಕಾರ್ಯಕ್ರಮ ನಡೆಯಲಿದೆ.