ಕೂಡಿಗೆ, ಸೆ. 27: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟ ಕೂಡಿಗೆ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಕೂಡಿಗೆ ಕ್ರೀಡಾ ಪ್ರೌಢಶಾಲೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾವಳಿಯ ಉದ್ಘಾಟನೆ ಯನ್ನು ಕ್ರೀಡಾ ಶಾಲೆಯ ಮುಖ್ಯ ಶಿಕ್ಷಕಿ ಕುಂತಿ ಬೋಪಯ್ಯ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಮಹಲಿಂಗಯ್ಯ, ಕಾಲೇಜಿನ ಉಪನ್ಯಾಸಕರಾದ ನಾಗಪ್ಪ, ರಮೇಶ, ಸತೀಶ್, ಕಾವೇರಮ್ಮ, ಕೀಡಾ ಶಾಲೆಯ ತರಬೇತಿದಾರರಾದ ಅಂತೋಣಿ ಡಿಸೋಜ, ವೆಂಕಟೇಶ ಹಾಗೂ ತಾಲೂಕಿನ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಇದ್ದರು.

ಪಂದ್ಯಾವಳಿಯಲ್ಲಿ ಆರು ಕಾಲೇಜಿನ ಹಾಕಿ ತಂಡಗಳು ಭಾಗವಹಿಸಿದ್ದವು.

ಕೂಡಿಗೆ ಪದವಿಪೂರ್ವ ಕಾಲೇಜು ತಂಡ ಪ್ರಥಮ, ದ್ವಿತೀಯ ಸ್ಥಾನವನ್ನು ಮಾದಾಪುರ ತಂಡಗಳಿಸಿದವು.