ಸೋಮವಾರಪೇಟೆ, ಸೆ. 27: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದ ಅಂಗನವಾಡಿ ಕೇಂದ್ರದ ಬಳಿ ಕಸದ ರಾಶಿ ನಿರ್ಮಾಣವಾಗಿದ್ದು, ಇದರಲ್ಲಿ ಜಾನುವಾರಿನ ಅಸ್ಥಿಪಂಜರ ಪತ್ತೆಯಾಗಿದೆ.

ಪ್ಲಾಸ್ಟಿಕ್ ಚೀಲದಲ್ಲಿ ಜಾನುವಾರಿನ ಮೂಳೆಗಳನ್ನು ಸಂಗ್ರಹಿಸಿ ಇಲ್ಲಿಗೆ ತಂದು ಸುರಿಯಲಾಗಿದ್ದು, ಇದರೊಂದಿಗೆ ಇತರ ತ್ಯಾಜ್ಯಗಳು ಕೊಳೆತು ದುರ್ವಾಸನೆ ಬೀರುತ್ತಿದೆ. ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇಂತಹ ಅವ್ಯವಸ್ಥೆ ನಿರ್ಮಾಣವಾಗಿದ್ದರೂ ಸಂಬಂಧಿಸಿದ ಗ್ರಾಮ ಪಂಚಾಯಿತಿಯವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ತಕ್ಷಣ ತ್ಯಾಜ್ಯವನ್ನು ಬೇರೆಡೆಗೆ ವಿಲೇವಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.