ಮಡಿಕೇರಿ, ಸೆ. 27 : ಪ್ರಕೃತಿಯ ಮೇಲೆ ನಕರಾತ್ಮಕ ಅಂಶಗಳು ಬೀರದಂತೆ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಬೆಳೆಸಬೇಕು. ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಫೀ.ಮಾ.ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಟಿ.ಡಿ. ತಿಮ್ಮಯ್ಯ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯು ಕ್ತಾಶ್ರಯದಲ್ಲಿ ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಪ್ರವಾಸೋದ್ಯಮ ಮತ್ತು ಡಿಜಿಟಲ್ ರೂಪಾಂತರ ಎಂಬ ಸಂದೇಶ ದೊಂದಿಗೆ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಅವರು ಮಾತನಾಡಿದರು.ಪ್ರವಾಸೋದ್ಯಮವು ದೇಶದ ಆರ್ಥಿಕ ಬೆಳೆವಣಿಗೆಗೆ ಮಹತ್ತರ ಪಾತ್ರವನ್ನು ನೀಡುತ್ತಿದ್ದು, ದೇಶದಲ್ಲಿ 1990ರ ನಂತರ ಅತೀ ವೇಗವಾಗಿ ಪ್ರವಾಸೋದ್ಯಮವು ಬೆಳೆಯುತ್ತಿದ್ದು, ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸುತ್ತಿರು ವದಾಗಿ ಅವರು ತಿಳಿಸಿದರು. ಸ್ಥಳೀಯ ಜನರ ಆರ್ಥಿಕ ಮಟ್ಟವು ಸುಧಾರಣೆಯಾಗುವದರ ಜೊತೆಗೆ ಕೊಡಗಿನ ಕಲೆ, ಸಂಸ್ಕøತಿ, ಜಗತ್ತಿಗೆ ಅನಾವರಣಗೊಳ್ಳುತ್ತದೆ. ಹಾಗೂ ಇದರ ಜೊತೆಯಲ್ಲಿಯೇ ಸ್ಥಳೀಯ ಜೀವ ವೈವಿದ್ಯತೆಗೆ ಧಕ್ಕೆ ಯಾಗದಂತೆ ಸುಸ್ಥಿರ ಪ್ರವಾ ಸೋದ್ಯಮಕ್ಕೆ ಎಲ್ಲರೂ ಕಟಿಬದ್ಧ ರಾಗಿರಬೇಕು. ಪ್ರವಾ ಸೋದ್ಯಮದಿಂದ ಕೊಡಗನ್ನು ಪರಿಸರ ಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ನಮ್ಮೆಲ್ಲರ ಹೊಣೆಗಾರಿಕೆ ಅತ್ಯಂತ ಮಹತ್ತರ ವಾದುದು ಎಂದು ಹೇಳಿದರು. ವಿದ್ಯಾರ್ಥಿಗಳ ಸರ್ವೋ ತೋಮುಖ ಬೆಳವಣಿಗೆಗೆ ಪ್ರವಾಸವು ಅತ್ಯಂತ ಮಹತ್ವವಾದುದು ಎಂದು ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಣ್ಣೇಕರ್ ಅವರು ತಿಳಿಸಿದ್ದಾರೆ. ಪ್ರವಾಸದಿಂದ ಬೇರೆ ಬೇರೆ ಪ್ರದೇಶಗಳ ಸಂಸ್ಕøತಿ, ಕಲೆ, ಸಾಹಿತ್ಯ, ಭೌಗೋಳಿಕ ಅರಿವು ಪರಿಚಯ ವಾಗುತ್ತದೆ. ತಾಂತ್ರಿಕತೆ ಯನ್ನು ಬಳಸಿಕೊಂಡು ಪ್ರವಾಸೋದ್ಯ ಮವನ್ನು ಅಭಿವೃದ್ಧಿಪಡಿಸಿ ಸುಸ್ಥಿರ ಪ್ರವಾ ಸೋದ್ಯಮಕ್ಕೆ ಎಲ್ಲರೂ ಒಂದಾಗಬೇಕು ಎಂದು ಅವರು ನುಡಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ಪ್ರವಾಸೋದ್ಯಮದಿಂದ ಜ್ಞಾನ ವೃದ್ಧಿಯಾಗುತ್ತದೆ. ತಾಂತ್ರಿಕತೆ ಹಾಗೂ ಡಿಜಿಟಲ್ ರೂಪಾಂತರದಿಂದ ಪ್ರವಾಸೋದ್ಯಮವು ತುಂಬಾ ಜನರಿಗೆ ಉದ್ಯೋಗ ನೀಡುತ್ತದೆ ಎಂದು ಅವರು ತಿಳಿಸಿದರು.

ಹೆಚ್ಚಿನ ತಂತ್ರಜ್ಞಾನದಿಂದ ಪ್ರವಾಸೋದ್ಯಮ (ಮೊದಲ ಪುಟದಿಂದ) ಅಭಿವೃದ್ಧಿಯಲ್ಲಿ ಆಗುವ ಅನುಕೂಲಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ಹಾಗೂ ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಮುಂದಾಗಿ ಜಿಲ್ಲೆಯ ಪ್ರಕೃತಿ ಸೌಂದರ್ಯವನ್ನು ಕಾಪಾಡಿ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು. ಸಮತೋಲನದಿಂದ ಕಾರ್ಯನಿರ್ವಹಿಸಿ ಸುಸ್ಥಿರ ಪ್ರವಾಸೋದ್ಯಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರಕೃತಿ ಸ್ನೇಹಿ ಪ್ರವಾಸೋದ್ಯಮವನ್ನು ಬೆಳೆಸಲು ನಾವೆಲ್ಲರೂ ಸ್ವಇಚ್ಛೆಯಿಂದ ಮುಂದೆ ಬಂದು ಭಾರತದ ಸ್ಕಾಟ್ ಲ್ಯಾಂಡ್ ಎಂದು ಕರೆಸಿಕೊಳ್ಳುವ ಕೊಡಗನ್ನು ಹಸಿರಾಗಿ ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅತಿವೃಷ್ಟಿಯಿಂದಾಗಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸ್ವಲ್ಪ ಪ್ರಮಾಣದ ಹಾನಿಯಾಗಿದ್ದು, ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಪ್ರವಾಸೋದ್ಯಮವನ್ನು ಬೆಳೆಸಬೇಕು. ಹಾಗೂ ಮುಂದಿನ ಪೀಳಿಗೆಗೆ ಸುಸ್ಥಿರ ಪ್ರವಾಸೋದ್ಯಮವನ್ನು ಉಳಿಸಿಕೊಡಬೇಕು ಎಂದು ತಿಳಿಸಿದರು.

ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲೆಯ ಖಾಸಗಿ ಪ್ರವಾಸೋದ್ಯಮ ಒಕ್ಕೂಟಗಳು ಉತ್ತಮ ರೀತಿಯಲ್ಲಿ ಸಹಕರಿಸಿದ್ದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಜಿಲ್ಲಾ ಹೊಟೇಲ್ ಮತ್ತು ರೆಸಾರ್ಟ್ ಒಕ್ಕೂಟದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮಾತನಾಡಿ, ಪ್ರವಾಸೋದ್ಯಮದಿಂದ ಬೇರೆ ಬೇರೆ ಪ್ರದೇಶದ ಸಂಸ್ಕøತಿ, ಕಲೆ, ಆಚಾರ, ವಿಚಾರಗಳನ್ನು ತಿಳಿದುಕೊಳ್ಳಬಹುದು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಮೊದಲಿನಂತೆ ನಿರ್ಮಾಣ ಮಾಡಲು ಎಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಗನ್ನಾಥ್ ಮಾತನಾಡಿ, ಉದ್ಯೋಗ ಅವಕಾಶದಲ್ಲಿ ಪ್ರವಾಸೋದ್ಯಮ ಮಹತ್ವದ ಪಾತ್ರ ಹೊಂದಿದೆ. ನೂರು ಜನರಲ್ಲಿ ಒಂಭತ್ತು ಜನರು ಪ್ರವಾಸೋದ್ಯಮದಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ ಎಂದು ಪ್ರವಾಸೋದ್ಯಮದಲ್ಲಿ ಉದ್ಯೋಗದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಣ್ಣೇಕರ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ಪ್ರವಾಸೋದ್ಯಮದ ಅಭಿವೃದ್ಧಿ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು.

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಸಾವನ್ನಪ್ಪಿದ ಜನರಿಗೆ ಸಂತಾಪ ಸೂಚಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಪಾರ್ವತಿ ಅಪ್ಪಯ್ಯ, ಕೊಡಗು ಜಿಲ್ಲಾ ಟೂರ್ಸ್ ಅಂಡ್ ಟ್ರಾವಲ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಸತ್ಯ, ಕೊಡಗು ಜಿಲ್ಲಾ ಕೈಗಾರಿಕಾ ಒಕ್ಕೂಟದ ಗಣೇಶ್ ಇತರರು ಇದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ನಿರೂಪಿಸಿದರು.