ಮಡಿಕೇರಿ, ಸೆ. 27 : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘ ಮಡಿಕೇರಿ ಇವರ ಜಂಟಿ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರ (ಪ್ಯಾರಾಲೀಗಲ್ ವಾಲಂಟಿಯರ್ಸ್) ಒಂದು ದಿನದ ತರಬೇತಿ ಮತ್ತು ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವು ತಾ. 28 ರಂದು ಬೆಳಿಗ್ಗೆ 10.30 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್, ಸಿ.ಜೆ.ಎಂ ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನಿಸ, ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು, ಸರ್ಕಾರಿ ಅಭಿಯೋಜಕ ಕೃಷ್ಣವೇಣಿ, ವಕೀಲರಾದ ಪಿ.ಯು.ಪ್ರೀತಂ, ಕೆ.ಎಂ.ಮೀನ ಕುಮಾರಿ, ಎಂ.ಎ .ನಿರಂಜನ್ ಇತರರು ಪಾಲ್ಗೊಳ್ಳಲಿದ್ದಾರೆ.