ಕುಶಾಲನಗರ, ಸೆ. 27: ಪ್ರಕೃತಿ ದುರಂತದಿಂದ ಚೇತರಿಕೆ ಗೊಳ್ಳುತ್ತಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತೆ ಗರಿಗೆದರುತ್ತಿರುವ ದೃಶ್ಯ ಕಂಡುಬಂದಿದೆ.
ಕಳೆದ ಕೆಲವು ಸಮಯ ದಿಂದ ಪ್ರವಾಸೋದ್ಯಮಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದ ಪ್ರವಾಸಿಗರ ಸಂಖ್ಯೆ ಸಂಪೂರ್ಣ ಕ್ಷೀಣಿಸಿತ್ತು. ಇದೀಗ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಪ್ರವಾಸಿಗರು ಕಂಡುಬರುತ್ತಿದ್ದು, ಸ್ಥಳೀಯ ಲಾಡ್ಜ್, ಹೊಟೇಲ್ ಉದ್ಯಮಿಗಳು ನಿಟ್ಟುಸಿರು ಬಿಡುವಂತಾಗಿದೆ. ಕೇರಳ, ತಮಿಳುನಾಡು ವ್ಯಾಪ್ತಿಯಿಂದ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿರುವ ದೃಶ್ಯ ಗೋಚರಿಸಿದೆ. -ಸಿಂಚು