ಗೋಣಿಕೊಪ್ಪ ವರದಿ, ಸೆ. 27: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪ್ರಿ ಯೂನಿವರ್ಸಿಟಿ ಕಾಲೇಜು ಸಹಯೋಗದಲ್ಲಿ ವೀರಾಜಪೇಟೆ ತಾಲೂಕು ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ ನಡೆಯಿತು.
ತಾಲೂಕಿನ ವಿವಿಧ ಕಾಲೇಜು ತಂಡಗಳು ಪಾಲ್ಗೊಂಡಿದ್ದವು. ಬಾಲಕರ ವಿಭಾಗದಲ್ಲಿ ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಬಾಲಕಿಯರಲ್ಲಿ ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡತು.
ಕೊಡವ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ರಾಕೇಶ್ ಪೂವಯ್ಯ ಉದ್ಘಾಟಿಸಿದರು. ಪ್ರಾಂಶುಪಾಲೆ ಡಾ. ಸಣ್ಣುವಂಡ ರೋಹಿಣಿ ತಿಮ್ಮಯ್ಯ ಬಹುಮಾನ ವಿತರಿಸಿದರು. ಎರಡು ವಿಭಾಗದ ತಲಾ 6 ಕ್ರೀಡಾಪಟುಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.