ಮಡಿಕೇರಿ, ಸೆ. 27: 2018ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದಲ್ಲಿರುವಂತೆ ಆರ್.ಡಿ ಸಂಖ್ಯೆ, ಅಭ್ಯರ್ಥಿಯ ಫೋಟೋ, ಎಸ್.ಎಸ್.ಎಲ್.ಸಿ.ಯ ಅಂಕಪಟ್ಟಿ, ಅಭ್ಯರ್ಥಿಯ ರಾಷ್ಟ್ರೀಕೃತ ಬ್ಯಾಂಕ್‍ಗಳ ಉಳಿತಾಯ ಖಾತೆಗಳ ವಿವರಗಳು ಬೇಕಾಗಿದ್ದು, ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ ಹಾಗೂ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು.
ಧನಶ್ರೀ ಯೋಜನೆಗೆ
ಪ್ರಸಕ್ತ (2018-19)ಸಾಲಿನಲ್ಲಿ ಧನಶ್ರೀ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಕೊಡಗು ಜಿಲ್ಲೆಗೆ 5 ಗುರಿಗಳನ್ನು ನಿಗದಿಪಡಿಸಲಾಗಿರುತ್ತದೆ. ಈ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರುವ 18-60 ವಯೋಮಿತಿಯ ಹೆಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ರೂ.50 ಸಾವಿರಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುತ್ತಿದೆ. ಈ ಪೈಕಿ ರೂ. 25 ಸಾವಿರಗಳ ನೇರ ಸಾಲ ಹಾಗೂ ರೂ. 25 ಸಾವಿರಗಳನ್ನು ಸಹಾಯಧನವನ್ನಾಗಿ ನೀಡಲಾಗುವದು. ಸಂಬಂಧಪಟ್ಟ ದಾಖಲೆಗಳೊಂದಿಗೆ ರೂ. 50 ಛಾಪಾ ಕಾಗದವನ್ನು ಲಗತ್ತಿಸಿ ಈ ಕಚೇರಿಗೆ ಸಲ್ಲಿಸುವದು.
ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಅರ್ಜಿದಾರರು ಹೆಚ್.ಐ.ವಿ. ಸೋಂಕಿತರೆಂದು ಆರೋಗ್ಯ ಕೇಂದ್ರದಲ್ಲಿ ಮತ್ತು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಪಡೆದ ವೈದೈಕೀಯ ದೃಢೀಕರಣ ಪತ್ರ. ಅರ್ಜಿದಾರರು ಮತ್ತು ನಿಗಮದೊಂದಿಗೆ ಸಾಲದ ಕುರಿತಾಗಿ ಮಾಡಿಕೊಳ್ಳುವ ಒಪ್ಪಂದ ಹಾಗೂ ಫಲಾನುಭವಿ ಸುಸ್ತಿದಾರರಾಗಿರುವದಿಲ್ಲ ಎಂದು ಸ್ವಯಂ ದೃಢೀಕರಣ ಇರುವ ರೂ. 50 ಛಾಪಾ ಕಾಗದ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, 2 ಪಾಸ್ ಪೋರ್ಟ್ ಅಳತೆಯ ಫೋಟೋ ಮತ್ತು ವ್ಯಾಪಾರ ಮಾಡುತ್ತಿರುವ ಫೋಟೋವನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ. ದೂ. 08272-298379 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.