ಸೋಮವಾರಪೇಟೆ, ಸೆ. 28: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಪ್ರಯುಕ್ತ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ಕೊಡ್ಲಿಪೇಟೆ ಸಮೀಪದ ಕ್ಯಾತೆ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಮತ್ತು ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಯೋಜನೆಯ ಬಗ್ಗೆ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ದೀನ್ ದಯಾಳರು ರಾಜಕೀಯ ವ್ಯವಸ್ಥೆಗೆ ಆದರ್ಶವಾದ ಬುನಾದಿ ಹಾಕಿದವರು. ಅವರ ಜನುಮ ದಿನವನ್ನು ಸ್ಮರಿಸುವ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸೌಲಭ್ಯಗಳು ದಯಾಳರು ರಾಜಕೀಯ ವ್ಯವಸ್ಥೆಗೆ ಆದರ್ಶವಾದ ಬುನಾದಿ ಹಾಕಿದವರು. ಅವರ ಜನುಮ ದಿನವನ್ನು ಸ್ಮರಿಸುವ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸೌಲಭ್ಯಗಳು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 14555 ಸಹಾಯ ವಾಣಿಗೆ ಕರೆ ಮಾಡಬಹುದಾಗಿದೆ ಎಂದರು.

ಕೇಂದ್ರ ಸರಕಾರದ ಸಾಮಾಜಿಕ, ಆರ್ಥಿಕ ಜನಗಣತಿಯಲ್ಲಿ ಜನರು ತಮ್ಮ ಶೇ. 80 ರಷ್ಟು ಆದಾಯವನ್ನು ಆರೋಗ್ಯಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಒಳರೋಗಿಗಳ ಚಿಕಿತ್ಸಾ ವೆಚ್ಚ ರೂ. 300 ರಷ್ಟು ಹೆಚ್ಚಾಗಿದೆ. ಈ ಕಾರಣದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

ವೇದಿಕೆಯಲ್ಲಿ ವೈದ್ಯಕೀಯ ಪ್ರಕೋಷ್ಠದ ಸಹಸಂಚಾಲಕ ಡಾ. ಉದಯಕುಮಾರ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಪ್ರಸಾದ್, ಭಗವಾನ್, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಪಕ್ಷದ ಹಿರಿಯ ಮುಖಂಡ ರೇಣುಕಪ್ಪ, ಯುವ ಮೋರ್ಚಾದ ಮೋಕ್ಷಿತ್, ಗ್ರಾಮದ ಪ್ರಮುಖ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.