ಸುಂಟಿಕೊಪ್ಪ, ಸೆ. 28: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ದೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಉದ್ಯೋಗ ತರಬೇತಿ ಕೇಂದ್ರದ ವತಿಯಿಂದ ಗ್ರಾಮೀಣ ಯುವಜನರಿಗೆ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಒದಗಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಂಪ್ಯೂಟರ್ ತರಬೇತಿ ಸೇರಿದಂತೆ ವಿವಿಧ ಕಂಪೆನಿಯಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಪದವಿ ಪಡೆದವರು ಬೆಂಗಳೂರಿನಲ್ಲಿ ಉಚಿತವಾಗಿ ತರಬೇತಿ ನೀಡಲಿದ್ದು, ಅನಂತರ ಅವರಿಗೆ ಪ್ರತಿಷ್ಠಿತ ಕಂಪೆನಿಯಲ್ಲಿ ಆದ್ಯತೆ ಮೇರೆ ಉದ್ಯೋಗಕ್ಕೆ ಅವಕಾಶವಿದೆ ಮತ್ತು ಸ್ವ ಉದ್ಯೋಗಕ್ಕೆ ತರಬೇತಿಯನ್ನು ನೀಡಲಾಗುವದು ಎಂದು ಸಂಪನ್ಮೂಲ ವ್ಯಕ್ತಿ ಸೋಮಣ್ಣ ಉದ್ಯೋಗಕಾಂಕ್ಷಿಗಳಿಗೆ ಮಾಹಿತಿ ನೀಡಿದ್ದರು.

ದೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಉದ್ಯೋಗ ತರಬೇತಿ ಕೇಂದ್ರದ ವತಿಯಿಂದ ಗ್ರಾಮೀಣ ಯುವಜನರಿಗೆ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಒದಗಿಸುವ ಕಾರ್ಯಾಗಾರದಲ್ಲಿ 174 ಅಭ್ಯರ್ಥಿಗಳು ಪಾಲ್ಗೊಂಡು ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಸಮಾರಂಭದ ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಕಂಬಿಬಾಣೆ ಗ್ರಾ.ಪಂ. ಅಧ್ಯಕ್ಷ ಕೆ.ಬಿ. ಕೃಷ್ಣ, ನಾಕೂರು-ಶಿರಂಗಾಲ ಗ್ರಾ.ಪಂ. ಅಧ್ಯಕ್ಷೆ ರಂಜನಿ, ಪಂಚಾಯಿತಿ ಸದಸ್ಯರಾದ ಕೆ.ಇ. ಕರೀಂ, ರಹೇನಾ ಫೈರೋಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮೇದಪ್ಪ, ಬಾಲಕೃಷ್ಣ ರೈ, ವಿಶ್ವನಾಥ್, ಗುಳ್ಳಪ್ಪ ಹಾಗೂ ವೀಣಾ ಮತ್ತಿತರ ಸಿಬ್ಬಂದಿಗಳು ಇದ್ದರು.