ಕುಶಾಲನಗರ, ಸೆ. 28: ಪ್ರಕೃತಿಯನ್ನು ಆರಾಧಿಸುವ ಮೂಲಕ ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕೊಡವ ಸಮಾಜ ಮಾಜಿ ಅಧ್ಯಕ್ಷರಾದ ಮಂಡೇಪಂಡ ಬೋಸ್ ಮೊಣ್ಣಪ್ಪ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಜೀವನದಿ ಕಾವೇರಿಗೆ ಹುಣ್ಣಿಮೆ ಅಂಗವಾಗಿ ನಡೆದ 85ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭ ಉಪಸ್ಥಿತರಿದ್ದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಮಾತನಾಡಿ, ಜಲಮೂಲಗಳ ಸಂರಕ್ಷಣೆಗೆ ಧಕ್ಕೆಯಾದಲ್ಲಿ ಪ್ರಕೃತಿ ದುರಂತಗಳು ನಡೆಯುವದು ಸಹಜ ಎಂದರಲ್ಲದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಬೇಕಾಗಿದೆ ಎಂದರು.
ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಕಾವೇರಿ ಅಷ್ಟೋತ್ತರ, ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಈ ಸಂದರ್ಭ ಸಮಿತಿಯ ಪ್ರಮುಖರಾದ ವನಿತಾ ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಬಿ.ಜೆ. ಅಣ್ಣಯ್ಯ ಮತ್ತಿತರರು ಇದ್ದರು.
ಹುಣ್ಣಿಮೆ ಅಂಗವಾಗಿ ಕುಶಾಲನಗರ ಕೊಪ್ಪ ಕಾವೇರಿ ಪ್ರತಿಮೆಗೆ ಅಭಿಷೇಕ ಮತ್ತು ಆರತಿ ಕಾರ್ಯಕ್ರಮ ನಡೆಯಿತು. ಬಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತು ಭಕ್ತಾದಿಗಳು ಇದ್ದರು.