ಸೋಮವಾರಪೇಟೆ, ಸೆ. 28: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪಂಚಾಯಿತಿ ಆವರಣದಲ್ಲಿ ನಡೆಯಿತು.

ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಮ್ಯೂಸಿಕಲ್ ಚೇರ್ ಹಾಗೂ ಪಾಸಿಂಗ್ ದ ಬಾಲ್ ಕ್ರೀಡೆಯಲ್ಲಿ ಕಾರ್ಮಿಕರು ಪಾಲ್ಗೊಂಡಿದ್ದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಆರೋಗ್ಯ ನಿರೀಕ್ಷಕ ಉದಯಕುಮಾರ್, ಪೌರ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಪಿಯೂಷ್ ಡಿಸೋಜಾ, ತಾಲೂಕು ಘಟಕದ ಅಧ್ಯಕ್ಷ ಕೆ.ವಿ. ವೆಂಕಟರಮಣ, ಉಪಾಧ್ಯಕ್ಷ ಚೆಲುವ ಮತ್ತಿತರರು ಉಪಸ್ಥಿತರಿದ್ದರು.