ಸೋಮವಾರಪೇಟೆ: ಜಿಲ್ಲಾಮಟ್ಟದ ಅಂತರ್ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಜಯಗಳಿಸಿದ ಇಲ್ಲಿನ ಓಎಲ್‍ವಿ ಶಾಲಾ ವಿದ್ಯಾರ್ಥಿಗಳು ವಿಭಾಗ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರಾಟೆಯಲ್ಲಿ ಓ.ಪಿ. ಪ್ರತೀಕ್ಷ, ಬಾಲಕರ ಚೆಸ್‍ನಲ್ಲಿ ಎಂ. ದಿವಿನ್, ಬಾಲಕಿಯರ ವಿಭಾಗದಲ್ಲಿ ರೆನಿಟ ಪಿಂಟೋ, ಉದ್ದ ಜಿಗಿತದಲ್ಲಿ ಅರ್ಪಿತ ಕೆ.ಎಲ್. ಅವರುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಬಾಲಕಿಯರ ವಿಭಾಗದ ಬಾಸ್ಕೆಟ್ ಬಾಲ್, ಬಾಲಕರ ವಿಭಾಗದ ಹ್ಯಾಂಡ್ ಬಾಲ್, ಹಾಕಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದು, ಹಾಕಿ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಜ್ಞಾನವಿಕಾಸ ಪ್ರಾಥಮಿಕ ಶಾಲೆ: ಜಿ.ಪಂ. ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮರಗೋಡಿನ ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ವೀರಾಜಪೇಟೆಯ ಚಿಕ್ಕಪೇಟೆಯಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜಯಗಳಿಸಿದ ಇಲ್ಲಿನ ಜ್ಞಾನವಿಕಾಸ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಉದ್ದಜಿಗಿತದಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ದುರ್ಗಶ್ರೀ, ಚೆಸ್‍ನಲ್ಲಿ ತನುಶ್ರೀ ಪ್ರಥಮ, ಬಾಲಕರ ವಿಭಾಗದ ಉದ್ದ ಜಿಗಿತದಲ್ಲಿ ಪೃಥ್ವಿ ಸಾಗರ್ ದ್ವಿತೀಯ, ಕರಾಟೆಯಲ್ಲಿ ವಿ.ಬಿ. ಸಿಂಚನ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕುಶಾಲನಗರ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ 2018-19ನೇ ಸಾಲಿನ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕೊಪ್ಪ ಭಾರತಮಾತ ಪಿ.ಯು. ವಿದ್ಯಾರ್ಥಿಗಳ ತಂಡ 4x100 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಮೈಸೂರಿನ ಓವೆಲ್ಸ್ ಗ್ರೌಂಡ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಆಲ್ಫಿನ್, ಶಶಾಂಕ್ ಹಾಗೂ ಮೇದಪ್ಪ 4x100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದರೆ, 100 ಮೀ. ಓಟದ ಸ್ಪರ್ಧೆಯಲ್ಲಿ 11.3 ಸೆಕೆಂಡ್ ಗುರಿ ತಲಪಿ ಆಲ್ಫಿನ್ ಪ್ರಥಮ ಸ್ಥಾನ ಗಳಿಸಿದ್ದಾರೆ, 200 ಮೀ. ಓಟದ ಸ್ಪರ್ಧೆಯಲ್ಲಿ 23 ಸೆಕೆಂಡ್‍ಗಳಲ್ಲಿ ಗುರಿಮುಟ್ಟಿ ಪ್ರಶಾಂತ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಸ್ಥರು ತಿಳಿಸಿದ್ದಾರೆ.