ಮಡಿಕೇರಿ, ಸೆ. 28:ಇತ್ತೀಚೆಗೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯ ಪರಿಹಾರ ಕಾರ್ಯಗಳು ಶೀಘ್ರಗತಿಯಲ್ಲಿ ನಡೆಯುತ್ತಿದೆ. ನಿರಾಶ್ರಿತರಿಗೆ ವಸತಿ ನಿರ್ಮಾಣ ಮತ್ತು ಕೃಷಿಭೂಮಿ ಕಳೆದು ಕೊಂಡವರಿಗೆ ಪರಿಹಾರ ಕಲ್ಪಿಸುವ ಕುರಿತು ಮತ್ತೊಮ್ಮೆ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ ಚರ್ಚಿಸಲಾಗುª Àದೆಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸಿಕೊಡÀಲು ಈಗಾಗಲೆ ಜಾಗವನ್ನು ಗುರುತಿಸಲಾಗಿದೆ. ಕೆ. ನಿಡುಗಣೆಯಲ್ಲಿ ಮಾದರಿ ಮನೆಯನ್ನು ಕೂಡ ಪ್ರದರ್ಶನಕ್ಕೆ ಇಡಲಾಗಿದ್ದು, ಯಾವ ರೀತಿಯ ಮನೆಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ವಿದೇಶದಿಂದ ಮರಳಿದ ನಂತರ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವದೆಂದರು. ಸರ್ಕಾರ, ಎಲ್ಲಾ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ರಾಜ್ಯದ ಜನತೆ ಹಾಗೂ ಅಧಿಕಾರಿ ವೃಂದದ ಸಹಕಾರ ದಿಂದ ಹಾನಿಗೀಡಾದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸಂಪರ್ಕವನ್ನು ಈಗಾಗಲೆ ಒದಗಿಸಲಾಗಿದೆ. ಇನ್ನು ಉಳಿದಿರುವ ಪರಿಹಾರ ಕಾರ್ಯ ವೆಂದರೆ ಮನೆಗಳ ನಿರ್ಮಾಣ ಮತ್ತು ಕೃಷಿ ಹಾಗೂ ತೋಟಗಳ ನಷ್ಟವನ್ನು ಅಂದಾಜಿಸಿ ಪರಿಹಾರ ವಿತರಿಸುವ ದಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವದೆಂದು ವೀಣಾ ಅಚ್ಚಯ್ಯ ಸ್ಪಷ್ಟ ಪಡಿಸಿದರು.

(ಮೊದಲ ಪುಟದಿಂದ) ಕೊಡಗಿನ ಸಂಕಷ್ಟಕ್ಕೆ ಸ್ಪಂದಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವದಾಗಿ ತಿಳಿಸಿದ ಅವರು, ಹಿಂದಿನ ಕೊಡಗನ್ನು ಮತ್ತೆ ಕಟ್ಟಿ ಬೆಳೆಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕೃಷಿಕರಿಗೆ, ಕಾಫಿ ಬೆಳೆಗಾರರಿಗೆ ಹಾಗೂ ಭೂಮಿ ಕಳೆದುಕೊಂಡವರಿಗೆ ಹಂತಹಂತವಾಗಿ ಪರಿಹಾರ ವಿತರಣೆಯಾಗಲಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಎಲ್ಲಾ ಕಾಂಗ್ರೆಸ್ ಸಂಸದರ ಹಾಗೂ ಶಾಸಕರ ಕೊಡುಗೆಯನ್ನು ಕ್ರೋಢೀಕರಿಸಿ ಕೆಪಿಸಿಸಿ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಕೊಟಿ ರೂ.ಗಳನ್ನು ನೀಡಲಾಗುವದೆಂದರು. ಪಶ್ಚಿಮ ಘಟ್ಟದ ಎಲ್ಲಾ ಪ್ರದೇಶಗಳಲ್ಲೂ ಪ್ರಾಕೃತಿಕ ವಿಕೋಪವಾಗುತ್ತಿದ್ದು, ರೆಸಾರ್ಟ್ ಮತ್ತು ಹೋಂ ಸ್ಟೇಗಳಿಂದ ಅನಾಹುತ ನಡೆದಿದೆ ಎನ್ನುವ ಹೇಳಿಕೆ ಊಹಾಪೋಹದಿಂದ ಕೂಡಿದೆ ಎಂದು ಶಿವು ಮಾದಪ್ಪ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮಿಟ್ಟು ಚಂಗಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಉಪಸ್ಥಿತರಿದ್ದರು.