ಮಡಿಕೇರಿ, ಸೆ. 28: ತಿಮ್ಮಯ್ಯ ವೃತ್ತದಿಂದ ಓಂಕಾರೇಶ್ವರ ದೇವಸ್ಥಾನದ ರಸ್ತೆಗೆ ಹೊಂದಿಕೊಂಡಂತೆ ಹೊಸದಾಗಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಡಿಕೇರಿ ನಗರಸಭೆ ಉಪಾಧ್ಯಕ್ಷÀ ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಣ್ಣಿ ಕೃಷ್ಣ, ಸದಸ್ಯÀ ಪಿ.ಡಿ. ಪೊನ್ನಪ್ಪ, ಇಂಜಿನಿಯರ್ ಹಾಗೂ ಕಾಂಟ್ರಾಕ್ಟರ್ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.