ಸೋಮವಾರಪೇಟೆ, ಸೆ. 29: ಇಲ್ಲಿನ ರೋಟರಿ ಸಂಸ್ಥೆಯ ವತಿ ಯಿಂದ ಸ್ಥಳೀಯ ಸಂತ ಜೋಸೆಫರ ಕಾಲೇಜಿನಲ್ಲಿ ರೋಟರ್ಯಾಕ್ಟ್ ಘಟಕದ ಸ್ಥಾಪನೆ ಮತ್ತು ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಟೆನ್ನಿ ಕುರಿಯನ್ ಅವರು, ರೋಟರಿ ಸಂಸ್ಥೆಯು ಸಮಾಜಮುಖಿಯಾಗಿ ಕೆಲಸ ನಿರ್ವಹಿ ಸುವದರ ಜತೆಗೆ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಮುಂದಾಗಿ ರುವದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿ ವಲಯ ಕಾರ್ಯದರ್ಶಿ ಕ್ರಿಜ್ವಲ್ ಕೋಟ್ಸ್, ರೋಟರಿ ಸಂಸ್ಥೆಯು ತಿಂಗಳಿಗೊಮ್ಮೆ ವ್ಯಕ್ತಿತ್ವ ವಿಕಸನ ಕ್ಷೇತ್ರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವದು ಎಂದರು.
ಸಂಸ್ಥೆ ಅಧ್ಯಕ್ಷ ಪಿ.ಕೆ. ರವಿ ಮಾತನಾಡಿ, ಸಂಸ್ಥೆ ವತಿಯಿಂದ ಯಡೂರಿನ ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜು, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ, ಸಂತ ಜೋಸೆಫರ ಪದವಿ ಕಾಲೇಜು ಸೇರಿದಂತೆ ಮೂರು ಕಾಲೇಜುಗಳಲ್ಲಿ ರೋಟರ್ಯಾಕ್ಟ್ ಘಟಕವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ನೂತನ ಅಧ್ಯಕ್ಷರಾಗಿ ಸಂತ ಜೋಸೆಫರ ಪದವಿ ಕಾಲೇಜಿನ ವಿದ್ಯಾರ್ಥಿ ಕ್ರೈಸ್ ಡೇವಿಡ್ ಹಾಗೂ ಕಾರ್ಯದರ್ಶಿಯಾಗಿ ಸಾಕ್ಷಿಯವರನ್ನು ನೇಮಕ ಮಾಡಲಾಯಿತು. ಇದರೊಂದಿಗೆ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಎ.ಡಿ. ಶುಭಾಕರ್, ಪಿ. ನಾಗೇಶ್, ಉಪನ್ಯಾಸಕಿ ಹಾಗೂ ಸಂಯೋಜಕಿ ಶೋಭಾ ಮತ್ತಿತರರು ಉಪಸ್ಥಿತರಿದ್ದರು.