ಕುಶಾಲನಗರ, ಸೆ. 29: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಈ ಸಾಲಿನ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಕುಶಾಲನಗರ ವಂಶಿ ಕಲಾಶಾಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೆ.ಎಂ.ಅಶ್ರಿತ, ಬಿ.ಎಸ್.ದೀಪಿಕಾ ಶೇ.90 ಅಂಕ ಪಡೆದಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಒಟ್ಟು ನಾಲ್ವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು ಉಳಿದ ಇಬ್ಬರು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ಧನಲಕ್ಷ್ಮಿ ರಘು ಅವರು ತರಬೇತಿ ನೀಡಿದ್ದಾರೆ.