ವೀರಾಜಪೇಟೆ, ಸೆ. 28: ಬೆಂಗಳೂರಿನ ಜಾಲಹಳ್ಳಿಯಲ್ಲಿ ಇತ್ತೀಚೆಗೆ ಡ್ಯಾನ್ಸ್-ಸ್ಪೋಟ್ರ್ಸ್ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ವೀರಾಜಪೇಟೆÉ ಸಂತ ಅನ್ನಮ್ಮ ಕಾಲೇಜಿನ ವಿದ್ಯಾರ್ಥಿನಿ ಎ.ಎಲ್. ತುಷಾಲಿ ಪಾಲ್ಗೊಂಡು ಭರತನಾಟ್ಯ ಸ್ಪರ್ಧೆಯಲ್ಲಿ ಸೋಲೋ ಮತ್ತು ಕಪಲ್ಸ್‍ನಲ್ಲಿ ಚಿನ್ನದ ಪದಕ ಪಡೆಯುವದರ ಮೂಲಕ ಪ್ರಥಮ ಸ್ಥಾನ ಗಳಿಸಿ ಅಕ್ಟೋಬರ್‍ನಲ್ಲಿ ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈಕೆ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದೂಷಿ ಪ್ರೇಮಾಂಜಲಿ ಅವರ ಶಿಷ್ಯೆ ಮತ್ತು ವಾಣಿ ಅವರ ಪುತ್ರಿ.