ಕೂಡಿಗೆ, ಸೆ. 29 : ಕೂಡಿಗೆ ಗ್ರಾಮ ಪಂಚಾಯ್ತಿಯ ಮದಲಾಪುರ ಗ್ರಾಮದಲ್ಲಿರುವ ಜ್ಯೋತಿ ಎಂಬವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರು ಮಾಡಿದ್ದ ಸಾಲವನ್ನು ತೀರಿಸಲು ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಜ್ಯೋತಿ ಅವರು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ತನ್ನ ತಾಯಿಯೊಂದಿಗೆ ಬಿಟ್ಟು ಸಾಲ ತೀರಿಸಲು ಹಣ ಹೊಂದಿಸಲು ಬೆಂಗಳೂರಿಗೆ ಕೆಲಸವನ್ನು ಹುಡುಕಿ ಹೊರಟು ಹೋಗಿದ್ದ ಘಟನೆ ನಡೆದಿತ್ತು. ಆರು ತಿಂಗಳು ಕಳೆದ ನಂತರ ಜ್ಯೋತಿ ಪುನಃ ತಮ್ಮ ಮನೆಗೆ ಬಂದಿದ್ದಾರೆ.
ಮಕ್ಕಳ ಅಳಲನ್ನು ಅರಿತು ಸ್ಥಳಕ್ಕೆ ಶಾಸಕ ಅಪ್ಪಚ್ಚುರಂಜನ್ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿ, ಈಗಾಗಲೇ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣು ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಕರಿಸುವದಾಗಿ ಭರವಸೆ ನೀಡಿದ್ದಾರೆ. ಪಿಯುಸಿ ವಿದ್ಯಾಭ್ಯಾಸಕ್ಕೆ ಮೊರಾರ್ಜಿ ವಸತಿ ಶಾಲೆಗೆ ಸೇರ್ಪಡೆಗೊಳಿಸಿ, ಜ್ಯೋತಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಎಲ್ಲಾ ಖರ್ಚುಗಳನ್ನು ಭರಿಸುವದಾಗಿ ಹೇಳಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಆರ್. ಶ್ರೀನಿವಾಸ್, ಕೂಡಿಗೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಗಿರೀಶ್‍ಕುಮಾರ್, ಕೂಡಿಗೆ ಬಿಜೆಪಿ ಬೂತ್ ಅಧ್ಯಕ್ಷ ಜಗದೀಶ್, ಬಿಜೆಪಿ ಯುವ ಮೋರ್ಚದ ಅಧ್ಯಕ್ಷ ಬೊಮ್ಮೇಗೌಡನ ಚಿಣ್ಣಪ್ಪ, ಮದಲಾಪುರದ ಕುಮಾರ್ ಇದ್ದರು.