ಮಡಿಕೇರಿ, ಸೆ. 29: ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರ ಶಿಕ್ಷಣ, ತರಬೇತಿಯನ್ನು ನೀಡುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಹಕಾರ ಶಿಕ್ಷಣ ನಿಧಿ ಸಂಗ್ರಹಣೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಶೇ. 100 ರಷ್ಟು ಶಿಕ್ಷಣ ನಿಧಿಯನ್ನು ಸಂಗ್ರಹಿಸುವ ರಾಜ್ಯದ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ವಿಶೇಷ ಸಾಧನೆಗಾಗಿ ಯೂನಿಯನ್ ಪ್ರಮುಖರನ್ನು ಸನ್ಮಾನಿಸಲಾಯಿತು.
ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಮತ್ತು ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ, ಕೆ.ಐ.ಸಿ.ಎಂ. ಪ್ರಾಂಶುಪಾಲೆ ಆರ್.ಎಸ್. ರೇಣುಕ, ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ ಮತ್ತು ಯೂನಿಯನ್ ವ್ಯವಸ್ಥಾಪಕಿ ಆರ್. ಮಂಜುಳ ಸ್ವೀಕರಿಸಿದರು. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ ಸ್ವೀಕರಿಸಿದರು.