ಮಡಿಕೇರಿ, ಅ. 2: ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರದ ಹೆಸರು : ಕೂಡಿಗೆ ಕೊಪ್ಪಲು, ಕೊತ್ತನಹಳ್ಳಿ, ಕುಮಾರಳ್ಳಿ ಬಾಚಳ್ಳಿ, ಅಂದಗೋವೆ ಮತ್ತು ದೊಡ್ಡತೊಳೂರು.
ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರದ ಹೆಸರು: ಶುಂಠಿ, ಹೊಸಪಟ್ಟಣ, ನೇಗಳ್ಳೆ, ಚಿಕ್ಕತೊಳೂರು, ಕೂತಿ, ಮಾದೇಗೊಡು, ಬಸವೇಶ್ವರ ರಸ್ತೆ, ಊರುಗುಪ್ಪೆ ಪೈಸಾರಿ, ಕಾನ್ವೆಂಟ್ ಬಾಣಿ, ಶಿವರಳ್ಳಿ, ಇನಕನಹಳ್ಳಿ, ಉಲುಗುಲಿ, ಅಳಿಲುಗುಪ್ಪೆ, 7ನೇ ಹೊಸಕೋಟೆ, ಮಾದ್ರೆ, ಗದ್ದೆಹಳ್ಳ, ಅಂಬೇಡ್ಕರ್ ಕಾಲೋನಿ, ಆಲೆಕಟ್ಟೆ ರಸ್ತೆ, ಬಾಣವಾರ, ಆಲೂರು ಸಿದ್ದಾಪುರ, ಹಾರೆಹೊಸೂರು, ಭರಸಿ ದೇವರಕಾಡು ಹಾಗೂ ಮಸಗೋಡು.
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ತಾ. 30 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯವರೆಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೆ ಯಾವದೇ ರೂಪದ ಅರ್ಜಿಗಳನ್ನು ಯಾವದೇ ಕಾರಣಕ್ಕೂ ಪರಿಗಣಿಸುವದಿಲ್ಲ. ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08276-282281 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.