ಸೋಮವಾರಪೇಟೆ,ಅ.1: ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮ ತಾ.2ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಮುದಾಯ ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಎಚ್.ಎಸ್.ಶರಣ್ ತಿಳಿಸಿದ್ದಾರೆ.ಮಾಜಿ ಸಚಿವ ಬಿ.ಎ.ಜೀವಿಜಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಡಿವೈಎಸ್ಪಿ ಪಿ.ಕೆ.ಮುರುಳೀಧರ್, ಸಂಘದ ಸಂಚಾಲಕ ಕೆ.ಎನ್.ಜಗದೀಶ್, ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಅನಿಜಿತ್ ಎ.ಶೆಟ್ಟಿ, ಅಧ್ಯಕ್ಷ ಎಚ್.ಆರ್.ಸುರೇಶ್, ನಿರ್ದೇಶಕ ಎಚ್.ಸಿ.ರಾಮಪ್ರಸಾದ್, ವಿದ್ಯಾರ್ಥಿ ಪರಿಷತ್ ಸಂಯೋಜಕ ಜಿ.ಕೆ.ಯೋಗೇಶ್ ಭಾಗವಹಿಸಲಿದ್ದಾರೆ.