ಮಡಿಕೇರಿ, ಅ.2: ಸರ್ಕಾರಿ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವೃತ್ತಿಪರ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಕನ್ನಡದಲ್ಲೂ ಆರಂಭಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸಿದೆ.
ಈ ಸಂಬಂಧ ಮಂಗಳವಾರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರು, ಸರ್ಕಾರಿ ಶಾಲೆಗಳನ್ನು ಮತ್ತು ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಾಚೀನ ಭಾಷೆಗಳಲ್ಲಿ 2 ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಮತ್ತು ಸ್ವಂತ ಲಿಪಿಯನ್ನು ಹೊಂದಿರುವ ಒಂದು ವಸ್ತುವಿಗೆ ಹಲವಾರು ಪದಗಳಿಂದ ಬರೆಸಿಕೊಳ್ಳಲು ಸಾಮಥ್ರ್ಯವಿರುವ ಏಕೈಕ ಭಾಷೆ ಕನ್ನಡ ಭಾಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ, ಮಡಿಕೇರಿ, ಅ.2: ಸರ್ಕಾರಿ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವೃತ್ತಿಪರ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಕನ್ನಡದಲ್ಲೂ ಆರಂಭಿಸಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಒತ್ತಾಯಿಸಿದೆ.
ಈ ಸಂಬಂಧ ಮಂಗಳವಾರ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರು, ಸರ್ಕಾರಿ ಶಾಲೆಗಳನ್ನು ಮತ್ತು ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಾಚೀನ ಭಾಷೆಗಳಲ್ಲಿ 2 ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಮತ್ತು ಸ್ವಂತ ಲಿಪಿಯನ್ನು ಹೊಂದಿರುವ ಒಂದು ವಸ್ತುವಿಗೆ ಹಲವಾರು ಪದಗಳಿಂದ ಬರೆಸಿಕೊಳ್ಳಲು ಸಾಮಥ್ರ್ಯವಿರುವ ಏಕೈಕ ಭಾಷೆ ಕನ್ನಡ ಭಾಷೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ, ಗ್ರಾಮೀಣ ಪ್ರದೇಶಗಳಿಗೂ ಲಭ್ಯವಾಗಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ವಿವಿಧ ರೀತಿಯ ಪ್ರಕಟಣೆ ಮತ್ತು ಸೂಚನಾ ಫಲಕಗಳನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳೆ ಆಂಗ್ಲ ಭಾಷೆಗೆ ಒತ್ತು ನೀಡಿ ಅಳವಡಿಸುವ ಮೂಲಕ ಕನ್ನಡಕ್ಕೆ ಅವಮಾನ ಮಾಡುತ್ತಿವೆ ಎಂದು ಲೋಕೇಶ್ ಸಾಗರ್ ಇದೇ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ಕೆಡಿಪಿ ಸೇರಿದಂತೆ ವಿವಿಧ ಸಭೆಗಳಲ್ಲಿ ಜಿಲ್ಲಾಡಳಿತದ ಗಮನ ಸೆಳೆದಿದ್ದರು ಇದುವರೆಗೆ ಯಾವದೇ ಕ್ರಮವನ್ನು ಜಿಲ್ಲಾಡಳಿತ ಕೈಗೊಂಡಿಲ್ಲ ಎಂದು ದೂರಿದ ಅವರು, ಇಂತಹ ಪ್ರಕರಣಗಳಲ್ಲಿ ಸರ್ಕಾರದ ನಿಯಮದಂತೆಯೇ 10 ಸಾವಿರ ರೂ.ಗಳ ವರೆಗೆ ದಂಡ ವಿಧಿಸಲು ಮತ್ತು ಮುಂದೆಯೂ ನಾಮ ಫಲಕ ಸರಿಪಡಿಸದಿದ್ದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ದಾವೆ ದಾಖಲಿಸಲು ಅವಕಾಶವಿದ್ದರೂ ಸಂಬಂಧಿಸಿದ ಇಲಾಖೆಗಳು ಮತ್ತು ಪ್ರಾಧಿಕಾರ ಅಸಡ್ಡೆ ತೋರುತ್ತಿವೆ ಎಂದು ಆರೋಪಿಸಿದರು.
ಅಕ್ಟೋಬರ್ ಅಂತ್ಯದೊಳಗೆ ಅಂತಹ ನಾಮಫಲಕಗಳನ್ನು ಗುರುತಿಸಿ, ಸರಕಾರದ ಆದೇಶಕ್ಕೆ ಅನುಗುಣವಾಗಿ ಮಾರ್ಪಡಿಸದಿದ್ದಲ್ಲಿ ಪರಿಷತ್ತಿನ ವತಿಯಿಂದಲೇ ಅಂತಹ ನಾಮ ಫಲಕಗಳಿಗೆ ಮಸಿ ಬಳಿಯುವದಾಗಿ ಎಚ್ಚರಿಸಿದ ಅವರು, ಇದರಿಂದಾಗುವ ಅನಾಹುತಗಳಿಗೆ ಜಿಲ್ಲಾಡಳಿತವೆ ಹೊಣೆಯಾಗ ಬೇಕಾಗುತ್ತದೆ ಎಂದು ತಿಳಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಖಾಸಗಿ ದಾವೆ ದಾಖಲಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಕೋಡಿ ಚಂದ್ರಶೇಖರ್ ಉಪಸ್ಥಿತರಿದ್ದರು.