ಸೋಮವಾರಪೇಟೆ, ಅ. 2: ಶಿಕ್ಷಣದಿಂದ ಮಾತ್ರ ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಇಲ್ಲಿನ ಬಿಟಿಸಿಜಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕಾವ್ಯ ಹೇಳಿದರು.
ಸೋಮವಾರಪೇಟೆ ರೋಟರಿ ಹಿಲ್ಸ್ ವತಿಯಿಂದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಬ್ಬೆಟ್ಟ ಗಿರಿಜನರ ಕಾಲೋನಿಯಲ್ಲಿ ಆಯೋಜಿಸಿದ್ದ ಸಾಕ್ಷರತಾ ಆಂದೋಲನ ಕಾರ್ಯಕ್ರಮದಲ್ಲಿ ಸೋಮವಾರಪೇಟೆ, ಅ. 2: ಶಿಕ್ಷಣದಿಂದ ಮಾತ್ರ ಗಿರಿಜನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಇಲ್ಲಿನ ಬಿಟಿಸಿಜಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕಾವ್ಯ ಹೇಳಿದರು.
ಸೋಮವಾರಪೇಟೆ ರೋಟರಿ ಹಿಲ್ಸ್ ವತಿಯಿಂದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಬ್ಬೆಟ್ಟ ಗಿರಿಜನರ ಕಾಲೋನಿಯಲ್ಲಿ ಆಯೋಜಿಸಿದ್ದ ಸಾಕ್ಷರತಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಉನ್ನತ ಮಟ್ಟದ ಜೀವನವನ್ನು ನಡೆಸುತ್ತಿದ್ದಾರೆ. ಆದರೆ ಶೋಷಿತ ವರ್ಗಗಳ ಹಲವರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸದೆ ಇರುವ ಹಿನ್ನೆಲೆಯಲ್ಲಿ ಎಲ್ಲಾ ಸವಲತ್ತುಗಳಿಂದ ವಂಚಿತ ರಾಗುತ್ತಿರುವದು ಬೇಸರದ ವಿಷಯ ಎಂದರು.
ಹಾಡಿಗಳಲ್ಲಿ ವಾಸವಿರುವ ಮಂದಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಚೀಟಿಗಳನ್ನು ಒದಗಿಸುವ ಜವಾಬ್ದಾರಿಯನ್ನು ಜಿಲ್ಲಾಡಳಿತ ನಿರ್ವಹಿಸಬೇಕು. ಆಗ ಮಾತ್ರ ಸರ್ಕಾರದ ಹಲವು ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಗಿರಜನರಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.