ನಾಪೆÇೀಕ್ಲು, ಸೆ. 30: ಅ. 2ರಂದು ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಪೆÇೀಕ್ಲುವಿನ ಪಿ.ಪಿ. ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.
ನಾಪೆÇೀಕ್ಲು ಆಟೋ ಚಾಲಕರ ಸಂಘ ಮತ್ತು ಓಎಸ್‍ಎಫ್ ಸುನ್ನಿ ಮುಸ್ಲಿಂ ಜಮಾಅತ್ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಪಿ.ಫೌಂಡೇಶನ್ ಅಧ್ಯಕ್ಷ ಪಿ.ಎಂ.ಮೊಯ್‍ದೀನ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ|| ಕರುಂಬಯ್ಯ, ಉಪಮುಖ್ಯ ವೈದ್ಯಾಧಿಕಾರಿ ಡಾ|| ದೇವದಾಸ್, ಡಾ|| ಮದನ್ ಮೋಹನ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.