ಕುಶಾಲನಗರ, ಅ. 2: ಅವಿವಾಹಿತ ಯುವತಿಯೊಬ್ಬಳು ಮಗುವಿನ ತಾಯಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಪೊಲೀಸರು ಮೂವರನ್ನು ಅತ್ಯಾಚಾರ ಪ್ರಕರಣದಡಿ ಬಂಧಿಸಿದ್ದಾರೆ. ಇಲ್ಲಿನ ಟೌನ್ ಕಾಲೋನಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೊಸಕೋಟೆಯ ನಿವಾಸಿ ಜಾನ್ಸನ್, ಕೇರಳ ಮೂಲದ ಶಂಷೀರ್, ನೌಫಲ್ ಬಂಧಿತ ಆರೋಪಿಗಳು. ಕುಶಾಲನಗರ ಡಿವೈಎಸ್‍ಪಿ ಮುರಳೀಧರ್, ಠಾಣಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣ ದಾಖಲು ಮಾಡಲಾಗಿದೆ. - ಸಿಂಚು