ಕೂಡಿಗೆ, ಅ. 1: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮಕ್ಕೆ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಯಾವದೇ ರೀತಿಯ ಕ್ರಿಯಾಯೋಜನೆ ಸೇರ್ಪಡೆಗೊಳಿಸಿಲ್ಲ ಮತ್ತು ಸಮುದಾಯ ಭವನ ನಿರ್ಮಾಣ ಮಾಡುವ ಭರವಸೆ ನೀಡಿ, ಇದುವರೆಗೂ ಯಾವದೇ ರೀತಿಯ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ತಾ. 2 ರಂದು (ಇಂದು) ಕೂಡಿಗೆ ಗ್ರಾಮ ಪಂಚಾಯಿತಿ ಎದುರು ಬ್ಯಾಡಗೊಟ್ಟ ಗ್ರಾಮಸ್ಥರು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.