ಕೂಡಿಗೆ, ಅ. 2: ಕೂಡಿಗೆ ಗ್ರಾಮ ಪಂಚಾಯಿತಿಯ ಬ್ಯಾಟಗೊಟ್ಟ ಗ್ರಾಮದಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದ್ದು, ಕೇಂದ್ರದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ಅಡಿಯಲ್ಲಿ ಹತ್ತು ಲಕ್ಷ ರೂ ವೆಚ್ಚದ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲು ಹೊರಟಿರುವದು ಸರಿಯಾದ ಕ್ರಮವಲ್ಲ. ಇದನ್ನು ಸ್ಥಗಿತಗೊಳಿಸುವಂತೆ ಜಿ.ಪಂ. ಮಾಜಿ ಸದಸ್ಯ ಎಸ್.ಎನ್. ರಾಜಾರಾವ್ ಒತ್ತಾಯ ಮಾಡಿದ್ದಾರೆ.

ಬ್ಯಾಡಗೊಟ್ಟದ ಪುನರ್ವಸತಿ ಕೇಂದ್ರದಲ್ಲಿ 348 ಕುಟುಂಬಗಳಿದ್ದು, ಈ ವ್ಯಾಪ್ತಿಯಲ್ಲಿ ಅನೇಕ ರೋಗ ರುಜಿನಗಳಿಂದ ಹತ್ತಾರು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಈಗಾಗಲೇ ಗುರುತಿಸಲಾಗಿರುವ ಸರ್ವೆ ನಂ. 12 ರಲ್ಲಿ ಕಸ ವಿಲೇವಾರಿ ಘಟಕದ ಬದಲು ಶವಸಂಸ್ಕಾರದ ಘಟಕ ತೆರೆಯಬೇಕೆಂದು ಒತ್ತಾಯಿಸಿದ್ದಾರೆ.