ಗೋಣಿಕೊಪ್ಪ ವರದಿ, ಅ. 1 : ಕಾಫಿ ತೋಟದಲ್ಲಿ ಕಾಡಾನೆಯೊಂದು ಸಾವನಪ್ಪಿರುವ ಘಟನೆ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ.
ಗಂಡು ಕಾಡಾನೆ ಶವ ಇಂದು ಪತ್ತೆಯಾಗಿದ್ದು, ಪೊನ್ನಂಪೇಟೆ ಅರಣ್ಯ ವಲಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಗೆ ಸುಮಾರು 30 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಸಾವಿಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಸ್ಥಳೀಯ ಕಾಫಿ ತೋಟದಲ್ಲಿ ಶವ ಪತ್ತೆಯಾಗಿದೆ. 1 ದಿನಗಳ ಹಿಂದಷ್ಟೆ ಸಾವನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.