ಗೋಣಿಕೊಪ್ಪಲು, ಸೆ. 30: ಇಲ್ಲಿನ ಕಾವೇರಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುವರ್ಣ ಮಹೋತ್ಸವ ವರ್ಷಾಚರಣೆಯ ಉದ್ಘಾಟನೆಯನ್ನು ಮಾಡಲಾಯಿತು.
ಸಮಾಜ ಸೇವಕ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ. ಬೋಪಣ್ಣ ಎನ್.ಎಸ್.ಎಸ್. ಧ್ವಜಾ ರೋಹಣ ನೆರವೇರಿಸುವ ಮೂಲಕ ಸುವರ್ಣ ಮಹೋತ್ಸವ ವರ್ಷ ಉದ್ಘಾಟಿಸಿ ಮಾತನಾಡಿ, ‘ಎಲ್ಲರೂ ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವವನ್ನು ಬೆಳೆಸಿಕೊಂಡು, ಸಧೃಡ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಬೇಕಾದರೆ ನಾವೆಲ್ಲರೂ ಸಕ್ರಿಯವಾಗಿ ಅದರಲ್ಲಿ ಪಾಲ್ಗೊಳ್ಳಬೇಕು. ನಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು. ಎಲ್ಲರೂ ಪ್ಲಾಸ್ಟಿಕ್ ಕೈಚೀಲ ಬಳಕೆಯನ್ನು ನಿಲ್ಲಿಸಿ ಬಟ್ಟೆಯಿಂದ ತಯಾರಿಸಿದ ಬ್ಯಾಗ್ ಬಳಕೆಯನ್ನು ರೂಡಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲೆ ಪ್ರೊ. ಎಸ್.ಆರ್. ಉಷಾಲತ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಎನ್.ಎಸ್.ಎಸ್. ಅಧಿಕಾರಿ ಗಳಾದ ಎಂ.ಎನ್. ವನಿತ್ಕುಮಾರ್ ಹಾಗೂ ಎನ್.ಪಿ. ರೀತಾ ಉಪಸ್ಥಿತ ರಿದ್ದರು. ದೀಪಿಕ ಪ್ರಾರ್ಥಿಸಿದರು. ಪಲ್ಲವಿ ವಂದಿಸಿದರೆ, ಅಂಜೂಷ ಮತ್ತು ಮೇಘ ನಿರೂಪಿಸಿದರು.