ಮಡಿಕೇರಿ, ಸೆ. 30: ಮಹದೇವಪೇಟೆ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಸವಿತಾ ಭಟ್ ಅಧ್ಯಕ್ಷತೆಯಲ್ಲಿ ಸಂಘದ ಕಟ್ಟಡದಲ್ಲಿ ನಡೆಯಿತು.

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯೆಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ರೂಪ ಸುಮಂತ್ ಮತ್ತು ಶೈಲಾ ಮಂಜುನಾಥ್ ಪ್ರಾರ್ಥಿಸಿ, ಸವಿತಾ ಭಟ್ ಸ್ವಾಗತಿಸಿದರು. ವಸುಂದರಾ ಪ್ರಸನ್ನ ವಂದಿಸಿದರು.