ಮಡಿಕೇರಿ. ಅ. 3: 64ನೇ ವನ್ಯಜೀವಿ ಸಪ್ತಾಹ ಆಚರಣೆ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಣ್ಯ ವನ್ಯಜೀವಿ ಮತ್ತು ಜೀವಿ ವೈವಿಧ್ಯತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತಾ. 5 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ, ಸೋಮವಾರಪೇಟೆ ಮಾದರಿ ಪ್ರಾಥಮಿಕ ಶಾಲೆಯ ಶ್ರೀ ಚೆನ್ನಬಸಪ್ಪ ಸಭಾಂಗಣದಲ್ಲಿ ಹಾಗೂ ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳು ನಡೆಯಲಿವೆ.

ಅಂದು ಬೆಳಿಗ್ಗೆ 10.30 ಗಂಟೆಯಿಂದ 11.30 ಗಂಟೆಯವರೆಗೆ ಪ್ರೌಢಶಾಲೆ ವಿಭಾಗದಲ್ಲಿ ಪರಿಸರ ಸಮತೋಲನದಲ್ಲಿ ಪಾತ್ರ ಕುರಿತು ಹಾಗೂ ಪಿ.ಯು.ಸಿ. ವಿಭಾಗಕ್ಕೆ ಮಾನವ ಮತ್ತು ವನ್ಯಪ್ರಾಣಿ ಸಂಘರ್ಷ ನಿಯಂತ್ರಿಸಲು ಸ್ಥಳೀಯರ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಕೃತಿ ಮತ್ತು ವನ್ಯಜೀವಿ ಹಾಗೂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಪ್ರಕೃತಿ ಮತ್ತು ವನ್ಯಜೀವಿ ಕುರಿತು ಚಿತ್ರಕಲೆ ಸ್ಪರ್ಧೆ ನಡೆಯಲಿದೆ. ನಂತರ ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ಪ್ರೌಢ ಶಾಲೆ ವಿಭಾಗದಲ್ಲಿ ಮತ್ತು ಪಿ.ಯು.ಸಿ. ವಿಭಾಗದ ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ವನ್ಯಜೀವಿ ಕುರಿತು ಲಿಖಿತ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಡಿ.ಎಸ್. ದಯಾನಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ದೂ. 9448408742), ಶ್ರೀನಿವಾಸ ನಾಯಕ್, ವಲಯ ಅರಣ್ಯಾಧಿಕಾರಿ (ದೂ. 9663315823), ಕೆ.ಎಂ. ಮರಿಸ್ವಾಮಿ, ವಲಯ ಅರಣ್ಯಾಧಿಕಾರಿ (ದೂ. 9611854217) ಹಾಗೂ ವೀರೇಂದ್ರ, ವಲಯ ಅರಣ್ಯಾಧಿಕಾರಿ (ದೂ. 9611758153)ನ್ನು ಸಂಪರ್ಕಿಸಬಹುದು