ಸೋಮವಾರಪೇಟೆ, ಅ. 3: ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿರುವ ಹಿರಿಯ ನಾಗರಿ ಕರಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಸೂಚಿಸಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿಯಲ್ಲಿ ಆಯೋಜಿಸ ಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರ ವ್ಯಾಜ್ಯಗಳನ್ನು ವಿಳಂಬ ಮಾಡದೇ ಶೀಘ್ರವಾಗಿ ಬಗೆಹರಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅದರಂತೆ ಎಲ್ಲಾ ನ್ಯಾಯಾಲಯ ಗಳಲ್ಲೂ ಹಿರಿಯ ನಾಗರಿಕರಿಗೆ ವಿಶೇಷ ಪ್ರಾತಿನಿಧ್ಯವಿದೆ. ಹಿರಿಯ ನಾಗರಿP Àರಾಗಿರುವ ಕಕ್ಷಿದಾರರು ತಮ್ಮ ವಕೀಲರ ಮೂಲಕ ನ್ಯಾಯಪೀಠದ ಗಮನ ಸೆಳೆಯಬೇಕು. ಹೀಗಾದರೆ ಪ್ರಾರಂಭದಲ್ಲೇ ಇಂತಹ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

ತಾಲೂಕು ದಂಡಾಧಿಕಾರಿಗಳ ಬಳಿಯಲ್ಲಿಯೂ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಅನೇಕ ವ್ಯಾಜ್ಯಗಳಿದ್ದು, ಇವುಗಳನ್ನೂ ಸಹ ಆದ್ಯತೆಯ ಮೇರೆ ವಿಲೇವಾರಿ ಮಾಡಬೇಕೆಂದು ತಾಲೂಕು ತಹಶೀಲ್ದಾರ್ ಮಹೇಶ್ ಅವರಿಗೆ ಸೂಚಿಸಿದರು. ಹಿರಿಯ ನಾಗರಿಕರಿಗೆ ಗೌರವ ನೀಡುವ ಸಂಸ್ಕøತಿ, ಸಂಸ್ಕಾರವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ಸಮಾಜದಲ್ಲಿ ವೃದ್ಧಾಶ್ರಮ, ಪೊಲೀಸ್ ಠಾಣೆ, ನ್ಯಾಯಾಲಯಗಳ ಸಂಖ್ಯೆ ಕಡಿಮೆಯಾಗಬೇಕು. ಅಂತಹ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗ ಬೇಕು. ಹಿರಿಯ ನಾಗರಿಕರಿಗೆ ಸರ್ಕಾರದ ವಿವಿಧ ಕಚೇರಿಗಳಲ್ಲಿ ಪ್ರಾಧಾನ್ಯತೆ ನೀಡಬೇಕು. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲಿಸುವ ಕ್ರಮ ಬದಲಾಗಬೇಕು ಎಂದರು.

ಕೌಟುಂಬಿಕ ಸಂಬಂಧಗಳು ಗಟ್ಟಿಯಾಗಿದ್ದರೆ ವೃದ್ಧಾಶ್ರಮಗಳ ಅವಶ್ಯಕತೆ ಇರುವದಿಲ್ಲ. ಈ ನಿಟ್ಟಿನಲ್ಲಿ ಮಾನವೀಯ ಮೌಲ್ಯಗಳು ನೆಲೆಗೊಳ್ಳ ಬೇಕು ಎಂದ ಅಭಿಮನ್ಯುಕುಮಾರ್, ಪಟ್ಟಣದಲ್ಲಿ ಹಿರಿಯ ನಾಗರಿಕರಿಗೆ ಕಚೇರಿ ಹೊಂದಲು ಅಗತ್ಯ ನಿವೇಶನ ನೀಡಲು ಕ್ರಮ ವಹಿಸುವಂತೆ ತಹಶೀಲ್ದಾರ್‍ಗೆ ಮನವಿ ಮಾಡಿದರು.

ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ಎಸ್. ಭರತ್, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ತಾಲೂಕು ತಹಶೀಲ್ದಾರ್ ಮಹೇಶ್ ಅವರುಗಳು ಉಪಸ್ಥಿತರಿದ್ದರು.