ಮಡಿಕೇರಿ,ಅ.4: ಸಂಪಾಜೆಯಲ್ಲಿರುವ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ತಾ. 5(ಇಂದು) ಬೆಳಗ್ಗೆ 10 ಗಂಟೆಗೆ ಸಂಪಾಜೆ ಹೋಬಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಜನಸಂಪರ್ಕ ಸಭೆ ನಡೆಸಲಿದ್ದಾರೆ. ಈ ಜನಸಂಪರ್ಕ ಸಭೆಗೆ ಮುಖ್ಯವಾಗಿ ಪ್ರಕೃತಿ ವಿಕೋಪದ ಸಂತ್ರಸ್ತರು ಮತ್ತು ಸಾರ್ವಜನಿಕರು ಹಾಜರಾಗಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೋರಿದ್ದಾರೆ.