ಮಡಿಕೇರಿ, ಅ. 4: ಮೂರ್ನಾಡುವಿನ ಪದವಿ ಕಾಲೇಜಿನಲ್ಲಿ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಪದವಿ ಕಾಲೇಜಿನ ಆವರಣದಲ್ಲಿ ನೂತನವಾಗಿ ಆರಂಭಿಸಿದ ಕ್ಯಾಂಟೀನ್‍ನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆಯನ್ನು ಮಾಡಲಾಗಿದೆ. ದೂರದ ಊರುಗಳಿಂದ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು ಮಧ್ಯಾಹ್ನದ ಭೋಜನಕ್ಕಾಗಿ ಮೂರ್ನಾಡು ಪಟ್ಟಣಕ್ಕೆ ಹೋಗಿ ಬರಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಆವರಣದಲ್ಲಿ ಆಡಳಿತ ಮಂಡಳಿಯ ನಿರ್ಧಾರದ ಮೇರೆಗೆ ಸುಲಭ ದರದಲ್ಲಿ ಉಪಹಾರ ದೊರಕುವಂತಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಎಸ್.ಎಂ.ಎಸ್. ವಿದ್ಯಾಪೀಠದ ಪ್ರಾಂಶುಪಾಲೆ ಕೆ.ಪಿ. ಕುಸುಮಾ, ಆಡಳಿತ ಮಂಡಳಿಯ ನಿರ್ದೇಶಕರುಗಳು, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.