*ಗೋಣಿಕೊಪ್ಪ, ಅ. 4: ನಿರಾಶ್ರಿತ ವಿದ್ಯಾರ್ಥಿಗಳಿಗೆ ಆಶ್ರಯ ಕಲ್ಪಿಸಿದ ಸಾಯಿಶಂಕರ್ ವಿದ್ಯಾಸಂಸ್ಥೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

125 ಕ್ಕು ಹೆಚ್ಚು ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ಸಂಸದರು ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವದು ಎಂದು ಭರವಸೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಶೂ, ಲೇಖನಿ ಸಾಮಗ್ರಿಗಳು ಪಠ್ಯ ಪಸ್ತಕ ಸಮವಸ್ತ್ರ ವ್ಯವಸ್ಥೆ ಕಲ್ಪಿಸಲಾಗುವದು; ಪಠ್ಯದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸದೃಢವಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್, ತಾಲೂಕು ಅಧ್ಯಕ್ಷ ಅರುಣ್ ಬೀಮಯ್ಯ, ಖಜಾಂಚಿ ಚೋಡುಮಾಡ ಶ್ಯಾಮ್ ಪೂಣಚ್ಚ, ಶಾಲಾ ಮುಖ್ಯ ಶಿಕ್ಷಕಿ ಹಾಜರಿದ್ದರು.