ಸೋಮವಾರಪೇಟೆ, ಅ 4: ಬಿಟಿಸಿಜಿ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ತೆರೆಯಲಾಗಿರುವ ಗ್ರಂಥಾಲಯವನ್ನು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಎ.ಆರ್. ಮುತ್ತಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜ್ಞಾನ ಸಂಪಾದನೆಗೆ ಪುಸ್ತಕಗಳು ಅವಶ್ಯಕವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣವನ್ನು ನೀಡಿ ಪುಸ್ತಕಗಳನ್ನು ಖರೀದಿಸಲು ಸಾಧ್ಯವಿಲ್ಲ. ಈ ಕಾರಣದಿಂದ ಕಾಲೇಜಿನಲ್ಲಿ ಗ್ರಂಥಾಲಯ ತೆರೆಯಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭ ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ಜಗದೀಶ್, ಹೆಚ್.ಪಿ. ರಾಜಪ್ಪ, ಗಣಪತಿ, ಶಿವಯ್ಯ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
 
						