ಸೋಮವಾರಪೇಟೆ,ಅ.4: ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ತಾ.6ರಂದು ಒಕ್ಕಲಿಗರ ಸಮುದಾಯಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಅಪ್ಪಚ್ಚು ರಂಜನ್, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರುಗಳಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಆಯನೂರು ಮಂಜುನಾಥ್, ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಅಧ್ಯಕ್ಷೆ ಪುಷ್ಪರಾಜೇಶ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.