ಸುಂಟಿಕೊಪ್ಪ,ಅ.4: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆ ತಾ. 6 ರಂದು 10.30 ಗಂ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಅಧ್ಯಕ್ಷತೆಯಲ್ಲಿ ಮಂಜನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ ಹಾಗೂ ನೋಡಲ್ ಅಧಿಕಾರಿಯಾಗಿ ಸಹಾಯಕ ಕೃಷಿ ಅಧಿಕಾರಿಗಳಾದ ಪಿ.ಎಸ್.ಬೋಪಯ್ಯ ಆಗಮಿಸಲಿದ್ದಾರೆ.
 
						